ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಕಾಂಚೀಪುರಂ, ತಿರುವಳ್ಳೂರು, ಪುದುಚೇರಿಯಲ್ಲೂ ಶಾಲಾ,ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚೆನ್ನೈ(ನ.03) ತಮಿಳುನಾಡಿನಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯಿಂದಾಗಿ ರಸ್ತೆಗಳೆಲ್ಲಾ ಕೆರೆಯಂತಾಗಿದೆ. ಎಲ್ಲಿ ನೋಡಿದರೂ ಪ್ರವಾಹದ ವಾತಾವರಣ ಸೃಷ್ಟಿಯಾಗಿದೆ.
ಹವಾಮಾನ ಇಲಾಖೆ ನೀಡಿದ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಕಾಂಚೀಪುರಂ, ತಿರುವಳ್ಳೂರು, ಪುದುಚೇರಿಯಲ್ಲೂ ಶಾಲಾ,ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚೆನ್ನೈನ ತಗ್ಗು ಪ್ರದೇಶದಲ್ಲಿ ಮಳೆ ಎದುರಿಸಲು ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ತಗ್ಗು ಪ್ರದೇಶಗಳಲ್ಲಿರುವ ಹಲವರ ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ. ನಿನ್ನೆಯೂ ಚೆನ್ನೈ ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿತ್ತು.
ತಮಿಳುನಾಡಿನಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.