ನಾಳೆಯಿಂದ 4 ದಿನ ಕರಾವಳಿ ಮಲೆನಾಡಿನಲ್ಲಿ ಭಾರಿ ಮಳೆ?

Heavy rains forecast in Karnataka's coastal and Malnad Next 4 Days
Highlights

ರಾಜ್ಯದ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಲೆನಾಡು ಭಾಗಗಳಲ್ಲಿ ಜೂನ್‌ 6ರಿಂದ 10ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
 

ಬೆಂಗಳೂರು :  ರಾಜ್ಯದ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಮಲೆನಾಡು ಭಾಗಗಳಲ್ಲಿ ಜೂನ್‌ 6ರಿಂದ 10ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕೊಂಚ ಹೆಚ್ಚಾಗಿರುವುದರಿಂದ ನಾಲ್ಕು ದಿನಗಳ ಕಾಲ ಆ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಮತ್ತು ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸುತ್ತಮುತ್ತ ಹೆಚ್ಚಿನ ಮಳೆಯಾಗಬಹುದು. ಉಳಿದಂತೆ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಬದಲು ಸಾಧಾರಣ ಮಳೆ ಬೀಳಲಿದೆ. ಸದ್ಯಕ್ಕೆ ಚಂಡಮಾರುತದ ಯಾವ ಲಕ್ಷಣಗಳೂ ಇಲ್ಲ ಎಂದು ಹೇಳಿದ್ದಾರೆ.

ಮೇ 30ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ. ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿವರೆಗೂ ಮುಂಗಾರು ವ್ಯಾಪಿಸಿದೆ. ಮುಂಗಾರು ಪ್ರವೇಶದ ಬಳಿಕ ರಾಜ್ಯದ ಅರ್ಧ ಭಾಗದಲ್ಲಿ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಮಳೆ ಆರ್ಭಟ ತುಸು ಹೆಚ್ಚಾಗಿಯೇ ಇದೆ.

loader