ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಿಟಿಸುತ್ತಿದ್ದಾರೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಅತ್ಯಧಿಕ ಮಳೆ ಸುರಿಯುತ್ತಿದೆ.
ಬೆಂಗಳೂರು : ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಿಟಿಸುತ್ತಿದ್ದಾರೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಅತ್ಯಧಿಕ ಮಳೆ ಸುರಿಯುತ್ತಿದೆ.
ಕಳೆದ 13 ವರ್ಷದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇನ್ನು ರಾಜ್ಯದಲ್ಲಿ ಹಲವು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಮುಂದಿನ ಜುಲೈ 2ರವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುತ್ತಿದೆ.
ಆದರೆ ಕರಾವಳಿ, ಮಲೆನಾಡು ಹೊರತು ಪಡಿಸಿ ರಾಜ್ಯದ 18 ತಾಲೂಕಿನಲ್ಲಿ ಮಳೆಯ ಕೊರತೆ ಉಂಟಾಗಿದೆ. ಇನ್ನು ರಾಜ್ಯದ 79 ತಾಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿಯುತ್ತಿದೆ.
