Asianet Suvarna News Asianet Suvarna News

3 ದಿನ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Heavy rains in Karnataka will continue for next 2-3 days

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದೆ. ಮಳೆ ಮತ್ತಷ್ಟುಚುರುಕಾಗುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು, ಮೂರು ದಿನ ಗುಡುಗು ಸಹಿತ ಭಾರಿ ಮಳೆಯ ಸಂಭವ ಇದೆ. ಕರಾವಳಿಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರ ಬೆಂಗಳೂರು ನಗರದಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಹಾಸನ, ಮೈಸೂರು, ಮಂಡ್ಯ, ಕೊಪ್ಪಳ, ಶಿವಮೊಗ್ಗ, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳ ಹಲವೆಡೆ ಹಗುರ ಹಾಗೂ ಸಾಧಾರಣ ಮಳೆ ಬಿದ್ದಿದೆ.

Follow Us:
Download App:
  • android
  • ios