24 ಗಂಟೆಗಳ ಅವಧಿಯಲ್ಲಿ 45ರಿಂದ 65 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಂಗಳೂರು(ಡಿ.2): ಓಖಿ ಚಂಡಮಾರುತದ ಪ್ರತಾಪ ಕರ್ನಾಟಕಕ್ಕೂ ಕೂಡ ತಟ್ಟಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲು ಜನರಿಗೆ ಸೂಚನೆ ನೀಡಲಾಗಿದೆ. 24 ಗಂಟೆಗಳ ಅವಧಿಯಲ್ಲಿ 45ರಿಂದ 65 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತೀರ ಪ್ರದೇಶದಲ್ಲಿ ನಾಲ್ಕು ಮೀಟರ್ ಎತ್ತರಕ್ಕೆ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಲಕ್ಷದ್ವೀಪ ಸಮೀಪದ ಅರಬ್ಬಿ ಸಮುದ್ರದಲ್ಲಿ ಓಖಿ ಅಬ್ಬರಕ್ಕೆ 3 ಹಡಗುಗಳು ನೀರುಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಮೀನುಗಾರರಿಗೂ ಕೂಡ ಕಡಲಿಗೆ ಇಳಿಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಮಂಗಳೂರು - ಕಾರವಾರ ಮಧ್ಯೆಯೂ ಓಖಿ ಹಿನ್ನೆಲೆಯಲ್ಲಿ ಇದೀಗ ಹೈ ಅಲರ್ಟ್ ಸೂಚನೆ ನೀಡಲಾಗಿದೆ. ರಾಜ್ಯ ಪ್ರಕೃತಿ ವಿಕೋಪ ಮುನ್ನೆಚ್ಚರಿಕಾ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಈ ಬಗ್ಗೆ ಸೂಚನೆಯನ್ನು ನೀಡಿದೆ.
