ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಸಂಬಂಧ ಪಕ್ಷ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ತೀರ್ಮಾನಿಸಲಿದ್ದು, ಈ ಕುರಿತ ಕುತೂಹಲಕ್ಕೆ ಶೀಘ್ರವೇ ತೆರೆ ಬೀಳಲಿದೆ ಎಂದು ಮಾಜಿ ಶಾಸಕಿ ಅನಿತಾ ಕುಮಾರ ಸ್ವಾಮಿ ಸ್ವಷ್ಟಪಡಿಸಿದರು.

ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಸಂಬಂಧ ಪಕ್ಷ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ತೀರ್ಮಾನಿಸಲಿದ್ದು, ಈ ಕುರಿತ ಕುತೂಹಲಕ್ಕೆ ಶೀಘ್ರವೇ ತೆರೆ ಬೀಳಲಿದೆ ಎಂದು ಮಾಜಿ ಶಾಸಕಿ ಅನಿತಾ ಕುಮಾರ ಸ್ವಾಮಿ ಸ್ವಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಹಾಸನಾಂಬ ತಾಯಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಹಾಗೂ ರಾಜಾಧ್ಯಕ್ಷ ಕುಮಾರಸ್ವಾಮಿ ಕೈಗೊಳ್ಳುವ ನಿರ್ಧಾರಕ್ಕೆ ತಾನು ಬದ್ಧಳಾಗಿದ್ದು ಸಮಯ ಬಂದಾಗ ಎಲ್ಲವೂ ತಿಳಿಯುತ್ತದೆ ಎಂದರು.

ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು ನ.3ರಿಂದ ಮೈಸೂರಿನಿಂದಲೇ ಚುನಾವಣಾ ಪ್ರಚಾರ ಪ್ರಾರಂಭಿಸುವ ಮೂಲಕ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಅದೇ ರೀತಿ ಪುತ್ರ ನಿಖಿಲ್ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದು ಎರಡು ತಿಂಗಳು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂದರು.