ಕೊನೆಗೂ ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ಶಮನಕ್ಕೆ ಹೈ ಕಮಾಂಡ್ ಮುಂದಾಗಿದೆ. ಈ ಹಿನ್ನೆಲೆ, ರಾಜ್ಯ ಬಿಜೆಪಿ ಉಸ್ತುವಾರಿಯಾಗಿರುವ ಮುರಳೀಧರ್ ರಾವ್ ಗೆ ಇಂದು ಬೆಂಗಳೂರಿಗೆ ತೆರಳುವಂತೆ ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಬೆಂಗಳೂರು(ಎ.29): ಕೊನೆಗೂ ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ಶಮನಕ್ಕೆ ಹೈ ಕಮಾಂಡ್ ಮುಂದಾಗಿದೆ. ಈ ಹಿನ್ನೆಲೆ, ರಾಜ್ಯ ಬಿಜೆಪಿ ಉಸ್ತುವಾರಿಯಾಗಿರುವ ಮುರಳೀಧರ್ ರಾವ್ ಗೆ ಇಂದು ಬೆಂಗಳೂರಿಗೆ ತೆರಳುವಂತೆ ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಇನ್ನು, ಪಕ್ಷದ ವಿದ್ಯಮಾನಗಳ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ. ಮತ್ತೊಂದೆಡೆ ಇಂದು ರಾಮ್ ಲಾಲ್ ಅವರನ್ನ ಯಡಿಯೂರಪ್ಪ ಭೇಟಿಯಾಗಲಿದ್ದು, ಈಶ್ವರಪ್ಪ ಹಾಗೂ ಸಂತೋಷ್ ಜೀ ವಿರುದ್ಧ ದೂರು ನೀಡಲಿದ್ದಾರೆ.
