ಕೇಂದ್ರ ಸಚಿವ  ಸದಾನಂದ ಗೌಡ ವಿರುದ್ಧದ ಎಫ್ಐಆರ್  ಹೈಕೋರ್ಟ್ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠದಿಂದ ರದ್ದುಗೊಳಿಸಿದೆ.

ಬೆಂಗಳೂರು (ಅ.11): ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧದ ಎಫ್ಐಆರ್ ಹೈಕೋರ್ಟ್ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠದಿಂದ ರದ್ದುಗೊಳಿಸಿದೆ.

2014ರ ಲೋಕಸಭಾ ಚುನಾವಣಾ ವೇಳೆ ನಿಂತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸದಾನಂದ ಗೌಡರ ವಿರುದ್ಧ ಎಫ್ಐಆರ್ ಹಾಕಲಾಗಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಡಿವಿಎಸ್ ಅರ್ಜಿ ಸಲ್ಲಿಸಿದ್ದರು.

ಚುನಾವಣೆ ಪ್ರಚಾರ ಅವಧಿ ಮುಗಿದ ಮೇಲೂ ಪ್ರಚಾರ ಮಾಡಿದ್ದರು ಎಂದು ಆರೋಪಿಸಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್ ಆಗಿತ್ತು. ಈ ಸಂಬಂಧ ಮಂಗಳೂರು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಹೀಗಾಗಿ ಪ್ರಕರಣ ರದ್ದು ಕೋರಿ ಡಿ.ವಿ.ಸದಾನಂದಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ ಎಫ್'ಐಆರ್'ನ್ನು ರದ್ದುಗೊಳಿಸಿದೆ.