ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ಅವರನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು (ಏ.03): ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ಅವರನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಶಶಿಕಲಾರನ್ನು ಭದ್ರತೆ ಕಾರಣದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸುವಂತೆ ಟ್ರಾಫಿಕ್ ರಾಮಸ್ವಾಮಿ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಶಶಿಕಲಾ ಸ್ಥಳಾಂತರದ ಬಗ್ಗೆ ಸರಕಾರ ನಿರ್ಧರಿಸಬೇಕು ಎಂದ ಕೋರ್ಟ್ ಹೇಳಿದೆ. ಸದ್ಯ ಶಶಿಕಲಾ ಪರಪ್ಪನ ಅಗ್ರಹಾರದಲ್ಲಿದ್ದಾರೆ.
