ಬೆಂಗಳೂರು(ಅ.7): ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ ಉಕ್ಕಿನ ಮೇಲುಸೇತುವೆ ನಿರ್ಮಾಣಕ್ಕೆ ಮುಂದಾಗಿರುವ ಬಿಡಿಎ ಕ್ರಮ ಪ್ರಶ್ನಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ಸರ್ಕಾರ ಮತ್ತು ಬಿಡಿಎಗೆ ನೋಟೀಸ್ ಜಾರಿ ಮಾಡಿದೆ. ಮೇಲುಸೇತುವೆ ನಿರ್ಮಾಣ ಪ್ರಕ್ರಿಯೆ ಮುಂದುವರೆದರೂ ಅರ್ಜಿಯ ಅಂತಿಮ ಅದೇಶಕ್ಕೆ ಒಳಪಟ್ಟಿರುತ್ತದೆ ಎಂದು ಕೋರ್ಟ್ ಸೂಚನೆ ನೀಡಿದೆ.