ಉಡುಪಿ ಜಿಲ್ಲೆಯ ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘ ಸೇರಿದಂತೆ ಸುಮಾರು 10 ಸಹಕಾರ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಅಶೋಕ್ ಬಿ.ಹಿಂಚಿಗೇರಿ ಅವರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಬೆಂಗಳೂರು(ನ.30): 500 ಮತ್ತು 1000 ಮುಖಬೆಲೆಯ ನೋಟುಗಳ ಅಮಾನ್ಯ ಮಾಡಿರುವ ಕ್ರಮ ಪ್ರಶ್ನಿಸಿ ನಾನಾ ಸಹಕಾರಿ ಸಂಘಗಳು ಸಲ್ಲಿಸಿರುವ ಅರ್ಜಿ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ)ಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಉಡುಪಿ ಜಿಲ್ಲೆಯ ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘ ಸೇರಿದಂತೆ ಸುಮಾರು 10 ಸಹಕಾರ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಅಶೋಕ್ ಬಿ.ಹಿಂಚಿಗೇರಿ ಅವರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ 500 ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ಯಾವುದೇ ಸೂಚನೆ ನೀಡದೆ ಅಮಾನ್ಯ ಮಾಡಿದೆ. ಅಲ್ಲದೆ, ಗ್ರಾಮೀಣ ಭಾಗದ ಸಹಕಾರಿ ಬ್ಯಾಂಕುಗಳಲ್ಲಿನ ರೈತರು ಹಾಗೂ ಬಡವರು ಠೇವಣಿಯಿಟ್ಟಿರುವ ಹಣದ ವಿನಿಮಯ ಮಾಡುವುದಕ್ಕೆ ಇದ್ದ ಅಕಾರವನ್ನು ಹಿಂಪಡೆದಿದೆ. ವಾಣಿಜ್ಯ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಖಾತೆಗಳಿಂದ ಖಾತೆದಾರ ವಾರಕ್ಕೆ ಕೇವಲ 24 ಸಾವಿರ ರು. ಹಣ ಪಡೆದುಕೊಳ್ಳಬೇಕು ಎಂಬ ನಿಯಮ ರೂಪಿಸಿದೆ. ಇದರಿಂದಾಗಿ ಸಹಕಾರಿ ಸಂಘಗಳಲ್ಲಿ ವ್ಯವಹಾರ ಮಾಡುತ್ತಿರುವ ಲಕ್ಷಾಂತರ ರೈತರಿಗೆ ತೊಂದರೆಯಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಲ್ಲದೆ, ಸಹಕಾರಿ ಸಂಘಗಳು ರಾಜ್ಯ ಸರ್ಕಾರದ ಅೀನಲ್ಲಿ ಬರಲಿವೆ. ಇವುಗಳನ್ನು ನಿಯಂತ್ರಿಸುವುದಕ್ಕೆ ಕೆಂದ್ರ ಸರ್ಕಾರಕ್ಕೆ ಅಕಾರವಿಲ್ಲ. ಆದರೆ ಕೆಂದ್ರ ಈ ಆದೇಶ ಅಸಾಂವಿಧಾನಿಕವಾಗಿದ್ದು, ಸಹಕಾರ ಸಂಘಗಳು ಹಾಗೂ ಸಹಕಾರಿ ಬ್ಯಾಂಕ್‌ಗಳ ಪಾಲಿಗೆ ಮಾರಕವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಆದೇಶ ಹಿಂಪಡೆಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.