ಟಿಪ್ಪು ಜಯಂತಿ ಆಚರಣೆ ಕುರಿತು ಮಧ್ಯ ಪ್ರವೇಶಕ್ಕೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಟಿಪ್ಪು ಜಯಂತಿ ಆಚರಣೆ ತಡೆಯಲು ಕಾನೂನಿನಲ್ಲಿ ಅವಕಾಶವಿದೆಯಾ? ಸುಪ್ರೀಂಕೋರ್ಟ್ ಅಥವಾ ಯಾವುದಾದರೂ ಹೈಕೋರ್ಟ್ ಆದೇಶವಿದೆಯೇ? ಇದೊಂದು ದೊಡ್ಡ ವಿಚಾರ. ಈ ಕುರಿತು ಸಮಗ್ರ ಚರ್ಚೆ ಅಗತ್ಯ ಎಂದು ಹಂಗಾಮಿ ಸಿಜೆ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಬೆಂಗಳೂರು (ನ.07): ಟಿಪ್ಪು ಜಯಂತಿ ಆಚರಣೆ ಕುರಿತು ಮಧ್ಯ ಪ್ರವೇಶಕ್ಕೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಟಿಪ್ಪು ಜಯಂತಿ ಆಚರಣೆ ತಡೆಯಲು ಕಾನೂನಿನಲ್ಲಿ ಅವಕಾಶವಿದೆಯಾ? ಸುಪ್ರೀಂಕೋರ್ಟ್ ಅಥವಾ ಯಾವುದಾದರೂ ಹೈಕೋರ್ಟ್ ಆದೇಶವಿದೆಯೇ? ಇದೊಂದು ದೊಡ್ಡ ವಿಚಾರ. ಈ ಕುರಿತು ಸಮಗ್ರ ಚರ್ಚೆ ಅಗತ್ಯ ಎಂದು ಹಂಗಾಮಿ ಸಿಜೆ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಟಿಪ್ಪು ಜಯಂತಿ ತಡೆ ಕೋರಿ ಕೊಡಗಿನ ಕೆ.ಪಿ. ಮಂಜುನಾಥ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡದಂತೆ ನಿರ್ದೇಶಿಸಲು ಕೋರಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಧ್ಯ ಪ್ರವೇಶಕ್ಕೆ ನಿರಾಕರಿಸಿದೆ. ಟಿಪ್ಪು ಜಯಂತಿ ಆಚರಣೆಗೆ ಈ ಹಂತದಲ್ಲಿ ತಡೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
