ಬಿಡಿಎ ರೂ.1,800 ಕೋಟಿ ವೆಚ್ಚದಲ್ಲಿ ಉಕ್ಕಿನ ಸೇತುವೆ ಯೋಜನೆ ಕೈಗೊಂಡಿರುವುದು ಸೂಕ್ತವಲ್ಲ. ಯೋಜನೆ ಜಾರಿ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ, ಅಹ​ವಾಲು ಅಥವಾ ಸಲಹೆ ಪಡೆದುಕೊಂಡಿಲ್ಲ. ಇದು ಸಂವಿ​ಧಾನದ ಪರಿಚ್ಛೇದ 243 (ಝಡ್‌ ಇ)ರ ಸ್ಪಷ್ಟಉಲ್ಲಂಘನೆ. ಇಷ್ಟುದೊಡ್ಡ ಮೊತ್ತದಲ್ಲಿ ಈ ಯೋಜನೆ ಹಮ್ಮಿಕೊಳ್ಳುವ ಅಗತ್ಯವೂ ಇಲ್ಲ. ಸಾರ್ವಜನಿಕರಿಗೆ ಅಷ್ಟೇನೂ ಉಪಯೋ​ಗವಾಗುವುದಿಲ್ಲ. ಹೀಗಾಗಿ, ಯೋಜನೆ ಜಾರಿಯಿಂದ ಹಿಂದೆ ಸರಿಯುವಂತೆ ಬಿಡಿಎಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಬೆಂಗಳೂರು (ಅ.20): ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ ಉಕ್ಕಿನ ಸೇತು​ವೆ ನಿರ್ಮಾಣಕ್ಕೆ ಮುಂದಾಗಿರುವ ಬಿಡಿಎ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ.

ಬಿಡಿಎ ಉಕ್ಕಿನ ಸೇತುವೆ ನಿರ್ಮಿಸಲು ಉದ್ದೇಶಿಸಿರುವು​ದನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಮತ್ತು ನ್ಯಾ ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ, ಅರ್ಜಿಯನ್ನು ನಿನ್ನೆ ಮುಂದೂಡಿತ್ತು.