ರಾಜ್ಯ ಸರ್ಕಾರವು ಎಸಿಬಿಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ‌ನಿವಾಸದಿಂದ ಹೆಬ್ಬಾಳ ಶಾಸಕ ವೈ.ಎ.ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಬಿಜೆಪಿ ಮುಂದಾಗಿತ್ತು. ಆದರೆ ಎಂ.ಎಸ್.ರಾಮಯ್ಯ ಆಸ್ಪತ್ರೆ ಸರ್ಕಲ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಧದಿಂದಲೇ ಬಿಜೆಪಿ ಕಾರ್ಯಕರ್ತರು ಬಿಎಸ್​ವೈ ನಿವಾಸದ ಬಳಿ ಹಿಂದಿರುಗಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರವು ಎಸಿಬಿಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ‌ನಿವಾಸದಿಂದ ಹೆಬ್ಬಾಳ ಶಾಸಕ ವೈ.ಎ.ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಬಿಜೆಪಿ ಮುಂದಾಗಿತ್ತು. ಆದರೆ ಎಂ.ಎಸ್.ರಾಮಯ್ಯ ಆಸ್ಪತ್ರೆ ಸರ್ಕಲ್​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಧದಿಂದಲೇ ಬಿಜೆಪಿ ಕಾರ್ಯಕರ್ತರು ಬಿಎಸ್​ವೈ ನಿವಾಸದ ಬಳಿ ಹಿಂದಿರುಗಿದ್ದಾರೆ.

ಇನ್ನೊಂದು ಕಡೆ ಬಿಎಸ್’ವೈ ವಿರುದ್ಧ ಕಾಂಗ್ರೆಸ್ ಕೂಡ ಬೀದಿಗಿಳಿದಿದೆ. ಡಾಲರ್ಸ್ ಕಾಲೋನಿ ಪಾರ್ಕ್ ಸಮೀಪ ಬೆಂಗಳೂರು ಯುವ ಕಾಂಗ್ರೆಸ್​ನಿಂದ ಪ್ರತಿಭಟನೆಗೆ ಮುಂದಾಗಿದೆ. ಬಿಎಸ್​​​​​​ವೈ ನಿವಾಸದ ಎದುರು ಪ್ರತಿಭಟನೆಗೆ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಎಸ್​ವೈ ನಿವಾಸದತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.