ಬೆಂಗಳೂರು (ಸೆ.22): ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪವನ್ನು ಎದುರಿಸಿದ್ದ ಕೆ.ಜೆ ಜಾರ್ಜ್ ಅವರಿಗೆ ಸಿಐಡಿ ಕ್ಲೀನ್ ಚೀಟ್ ನೀಡಿದ್ದು ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಸಮ್ಮತಿ ಸೂಚಿಸಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಬಲವಾಗಿ ಕೇಳಿಬಂದಿತ್ತು. ಅವರು ರಾಜಿನಾಮೆ ನೀಡಬೇಕೆಂಬ ಒತ್ತಡ ಕೂಡ ಬಂದಿತ್ತು. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಸಿಐಡಿ ಪ್ರಕರಣದ ತನಿಖೆ ನಡೆಸಿ ಜಾರ್ಜ್ ಅವರಿಗೆ ಕ್ಲೀನ್ ಚೀಟ್ ನೀಡಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈ ಕಮಾಂಡ್ ಸೋನಿಯಾ ಗಾಂಧಿ, ದಿಗ್ವಿಜಯ್ ಸಿಂಗ್ ಸಮ್ಮತಿ ಸೂಚಿಸಿದ್ದಾರೆ.