ಬೆಳಗಾವಿ ಕಾಂಗ್ರೆಸ್ ಕಮಿಟಿ ಸಭೆಯಲ್ಲಿ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ  ರಾಜ್ಯ ಕಾಂಗ್ರೆಸ್ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ (ಅ.15):  ಬೆಳಗಾವಿ ಕಾಂಗ್ರೆಸ್ ಕಮಿಟಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ರಾಜ್ಯ ಕಾಂಗ್ರೆಸ್ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನ ಹೈಕಮಾಂಡ್ ನಿರ್ಧರಿಸಲಿದೆ. ಹೈಕಮಾಂಡ್ ಬಿಟ್ಟು ಬೇರೆ ಯಾರೊಬ್ಬರೂ ಅಭ್ಯರ್ಥಿಗಳನ್ನು ನಿರ್ಧರಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾವೊಬ್ಬ ನಾಯಕರ ಖಾಸಗಿ ಸ್ವತ್ತು ಅಲ್ಲ. ತಾವೇ ಮುಂದಿನ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಿಕೊಳ್ಳತ್ತಿರುವ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಮೊದಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸುವಂತೆ ಸೂಚನೆ ನೀಡುತ್ತಾ, ಜಾರಕಿಹೊಳಿ ಸಹೋದರರು ಒಗ್ಗಟ್ಟಾಗಿ ಕೆಲಸ ಮಾಡಲು ಸೂಚನೆ ನೀಡಿದ್ದಾರೆ.