'ಸನ್ನಿ ನೈಟ್ಸ್' ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾ. ಬಿ ವೀರಪ್ಪ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿದೆ. ಆದರೆ ಅನುಮತಿ ನೀಡಿಲ್ಲ.
ಬೆಂಗಳೂರು (ಡಿ.21): ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾ. ಬಿ ವೀರಪ್ಪ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿದೆ. ಆದರೆ ಅನುಮತಿ ನೀಡಿಲ್ಲ.
ವಿಚಾರಣೆ ವೇಳೆ ಖುದ್ದು ಡಿಸಿಪಿ ಗಿರೀಶ್ ಕೋರ್ಟ್ ಗೆ ಹಾಜರಾಗಿದ್ದರು.
ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಯಾವುದೇ ತಾರತಮ್ಯ ಮಾಡಿಲ್ಲ. ಡಿ.31 ರ ರಾತ್ರಿ ಯಾವುದೇ ಕಾರ್ಯಕ್ರಮಕ್ಕೂ ಅನುಮತಿ ನೀಡಿಲ್ಲ ಎಂದು ಹೈಕೋರ್ಟ್ ಗೆ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.
ಈಗಾಗಲೇ 80 ಲಕ್ಷ ಖರ್ಚು ಮಾಡಲಾಗಿದೆ. ಕೇವಲ ಕನ್ನಡ ಹಾಡುಗಳಿಗೆ ಮಾತ್ರ ಕುಣಿತ ಇರುತ್ತೆ. ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಅರ್ಜಿದಾರರ ಪರ ವಕೀಲ ಉದಯ್ ಹೊಳ್ಳ ಕೋರ್ಟ್'ಗೆ ಮನವಿ ಮಾಡಿದ್ದಾರೆ.
ಕೋರ್ಟ್ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.
