ನೋಟು ಬದಲಾವಣೆ ದಂಧೆ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಮಾಜಿ ಯೋಜನಾಧಿಕಾರಿ ಎಸ್.ಸಿ. ಜಯಚಂದ್ರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು (ಜೂ.21): ನೋಟು ಬದಲಾವಣೆ ದಂಧೆ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಮಾಜಿ ಯೋಜನಾಧಿಕಾರಿ ಎಸ್.ಸಿ. ಜಯಚಂದ್ರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ತಾನು ಬಂಧನಕ್ಕೆ ಒಳಗಾಗಿ ಆರು ತಿಂಗಳಾಗಿದೆ. ಜಾರಿ ನಿರ್ದೇಶನಾಲಯವು ಈಗಾಗಲೇ ತನಿಖೆ ಪೂರ್ಣಗೊಳಿಸಿದೆ. ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿದೆ. ಆದರೆ, ತನ್ನ ವಿರುದ್ಧ ಮಾಡಿರುವ ಆರೋಪಗಳಿಗೆ ಈ ಕಾಯ್ದೆಯ ಅಧಿನಿಯಮಗಳು ಅನ್ವಯಿಸುವುದಿಲ್ಲ. ಹೀಗಾಗಿ, ಜಾಮೀನು ನೀಡಬೇಕು ಎಂದು ಕೋರಿ ಹೈಕೋರ್ಟ್ ಜಯಚಂದ್ರ ಅರ್ಜಿ ಸಲ್ಲಿಸಿದ್ದಾರೆ. ಬುಧವಾರ ಜಯಚಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ವಿಚಾರಣೆಯನ್ನು ಜುಲೈ 5 ಕ್ಕೆ ಮುಂದೂಡಿತು.