ಹಾವೇರಿ : ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಬೆಳವಣಿಗೆಗಳಾಗುತ್ತಿದೆ. ಶೀಘ್ರ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. 

ಹಾವೇರಿಯಲ್ಲಿ ಮಾತನಾಡಿದ ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಸಚಿವ ಸಂಪುಟ ವಿಸ್ತರಣೆ ಬಳಿಕ ತಮಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ. 

ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕೈ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಕಾರ್ಯಕರ್ತರೇ ತೀರ್ಮಾನಿಸುತ್ತಾರೆ ಎಂದರು. 

ಪಕ್ಷದ ವಿರುದ್ಧವೇ ತಿರುಗಿ ಬಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್

ಕಾರ್ಯಕರ್ತರ ತೀರ್ಮಾನವೇ ನನಗೆ ಅಂತಿಮವಾಗಿದ್ದು. ಕಾರ್ಯಕರ್ತರು ಹೇಳಿದಂತೆ ನಾನು ಕೇಳುತ್ತೇನೆ. ಸಚಿವ ಸ್ಥಾನ ಸಿಗದಿದ್ದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪರೋಕ್ಷವಾಗಿ ಬಿ.ಸಿ ಪಾಟೀಲ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.