Asianet Suvarna News Asianet Suvarna News

'ಹಿಂದಿ ನಮ್ಮ ರಾಷ್ಟ್ರೀಯ ಭಾಷೆ; ಇದನ್ನು ಹೊರತುಪಡಿಸಿ ಅಭಿವೃದ್ಧಿ ಸಾಧ್ಯವಿಲ್ಲ'

ಹಿಂದಿ ಹೇರಿಕೆ ಬಗ್ಗೆ ಪರ-ವಿರೋಧ ಚರ್ಚೆ ಬಿಸಿಯಾಗಿರುವಾಗ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿವಾದಾತ್ಮಕ ಹೇಳಿಕೆ ನೀಡಿ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಕೇಂದ್ರ ಸರ್ಕಾರವು ಹಿಂದಿಯನ್ನು ಬಲವಂತವಾಗಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಪ್ರಾದೇಶಿಕ ಪಕ್ಷಗಳು ಆರೋಪಿಸಿದ್ದವು. ಈ ಹಿನ್ನಲೆಯಲ್ಲಿ ವೆಂಕಯ್ಯ ನಾಯ್ಡು, ಹಿಂದಿ ನಮ್ಮರಾಷ್ಟ್ರೀಯ ಭಾಷೆ. ಇದನ್ನು ಹೊರತುಪಡಿಸಿ ಅಭಿವೃದ್ದಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Hindi Our National Language Cannot Progress Without It  Venkaiah Naidu
  • Facebook
  • Twitter
  • Whatsapp

ನವದೆಹಲಿ (ಜೂ.24): ಹಿಂದಿ ಹೇರಿಕೆ ಬಗ್ಗೆ ಪರ-ವಿರೋಧ ಚರ್ಚೆ ಬಿಸಿಯಾಗಿರುವಾಗ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿವಾದಾತ್ಮಕ ಹೇಳಿಕೆ ನೀಡಿ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಕೇಂದ್ರ ಸರ್ಕಾರವು ಹಿಂದಿಯನ್ನು ಬಲವಂತವಾಗಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಪ್ರಾದೇಶಿಕ ಪಕ್ಷಗಳು ಆರೋಪಿಸಿದ್ದವು. ಈ ಹಿನ್ನಲೆಯಲ್ಲಿ ವೆಂಕಯ್ಯ ನಾಯ್ಡು, ಹಿಂದಿ ನಮ್ಮರಾಷ್ಟ್ರೀಯ ಭಾಷೆ. ಇದನ್ನು ಹೊರತುಪಡಿಸಿ ಅಭಿವೃದ್ದಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಸದರು ಭಾಷಣ ಮಾಡುವಾಗ ಹಿಂದಿಯಲ್ಲೇ ಮಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ಎಂದು ಸಂಸತ್ ಸಮಿತಿ ಕೇಳಿಕೊಂಡಿತ್ತು. ಇದಕ್ಕೆ ಪ್ರಾದೇಶಿಕ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಕೇಂದ್ರ ಸರ್ಕಾರವು ಹಿಂದಿಯನ್ನು ನಮ್ಮ ಮೇಲೆ ಹೇರಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದವು. ಆದರೆ ಈ ಆರೋಪವನ್ನು ತಳ್ಳಿ ಹಾಕಿದ ಕೇಂದ್ರ ಸರ್ಕಾರ ಹಿಂದಿಯನ್ನು ಹೇರುತ್ತಿಲ್ಲ, ಬದಲಾಗಿ ಉತ್ತೇಜಿಸುವ ಉದ್ದೇಶದಿಂದ ಹೀಗೆ ಹೇಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ಹಿಂದಿ ನಮ್ಮ ರಾಷ್ಟ್ರೀಯ ಭಾಷೆ.  ನಮ್ಮ ಐಡೆಂಟಿಟಿ. ಹಾಗಾಗಿ ನಾವು ಹೆಮ್ಮೆ ಪಡಬೇಕು. ಆದರೆ ನಮಗೆ ಇಂಗ್ಲೀಷ್ ಗೀಳು ಹೆಚ್ಚಾಗಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಪ್ರತಿಯೊಬ್ಬರು ಇಂಗ್ಲೀಷ್’ಗೆ ಬಾಗುತ್ತಾರೆ. ಯಾಕೆಂದರೆ ಅದು ಉದ್ಯೋಗವನ್ನು ಕೊಡುತ್ತದೆ ಎನ್ನುವ ಖಾತ್ರಿಯಿಂದ. ಇದರ ಜೊತೆಗೆ ನಮ್ಮ ಮಾತೃಭಾಷೆಯನ್ನು ಹೆಚ್ಚು ಹೆಚ್ಚು ಪ್ರೋತ್ಸಾಹಿಸಬೇಕೆಂದು ನಾನು ಕೇಳಿಕೊಳ್ಳುತ್ತೇನೆ. ಜೊತೆಗೆ ಹಿಂದಿಯನ್ನು ಕಲಿಯಬೇಕು ಎಂದಿದ್ದಾರೆ.

 

Follow Us:
Download App:
  • android
  • ios