ಪುತ್ತೂರು ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಿಂದೂ ಜಾಗರಣಾ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತರನ್ನು ಇಂದು ಬಂಧಿಸಲಾಗಿದೆ.

ಬೆಂಗಳೂರು (ಸೆ.29): ಪುತ್ತೂರು ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಿಂದೂ ಜಾಗರಣಾ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತರನ್ನು ಇಂದು ಬಂಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್ ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆ ಜಾಮೀನು ರಹಿತ ಕೇಸ್​ ದಾಖಲಿಸಲಾಗಿತ್ತು. ಈ ಹಿನ್ನೆಲೆ ಇವತ್ತು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪುತ್ತೂರು ಪೊಲೀಸರು ಜಗದೀಶ್​ ಕಾರಂತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಧನದ ನಂತ್ರ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಪುತ್ತೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ.