ಸುಪ್ರೀಂ ತೀರ್ಪು ಬೆಂಬಲಿಸಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಹಿಂದೂಮಹಾಸಭಾ

First Published 8, Apr 2018, 9:08 AM IST
Hindu Mahasabha wrote a letter to Modi in Blood
Highlights

ಒಂದೆಡೆ ಎಸ್‌ಸಿ/ಎಸ್‌ಟಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ದಲಿತರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಸುಪ್ರೀಂ ಕೋರ್ಟ್‌ನಲ್ಲಿ  ಕೇಂದ್ರ ಸರ್ಕಾರ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ಹಿಂದು ಮಹಾಸಭಾ, ರಕ್ತದಲ್ಲಿ ಬರೆದ ಅರ್ಜಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದೆ.

ಅಲಿಗಢ (ಏ. 08): ಒಂದೆಡೆ ಎಸ್‌ಸಿ/ಎಸ್‌ಟಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ದಲಿತರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಸುಪ್ರೀಂ ಕೋರ್ಟ್‌ನಲ್ಲಿ  ಕೇಂದ್ರ ಸರ್ಕಾರ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ಹಿಂದು ಮಹಾಸಭಾ, ರಕ್ತದಲ್ಲಿ ಬರೆದ ಅರ್ಜಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದೆ.

ಅರ್ಜಿ ಹಿಂಪಡೆಯಲು ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸುವುದಾಗಿಯೂ ಸದಸ್ಯರು ಬೆದರಿಕೆಯೊಡ್ಡಿದ್ದಾರೆ. ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಳಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ  ಸುಪ್ರೀಂಕೋರ್ಟ್, ಈ ಕಾಯ್ದೆಯಡಿ ದೂರು ನೀಡಿದಾಕ್ಷಣ ಮೇಲ್ನೋಟಕ್ಕೆ  ಆರೋಪ ಸಾಬೀತಾಗದ ಹೊರತೂ ಎಫ್‌ಐಆರ್ ದಾಖಲಿಸಕೂಡದು,  ಸರ್ಕಾರಿ ಅಧಿಕಾರಿಗಳನ್ನು ಇಲಾಖಾ ಮೇಲ್ವಿಚಾರಣೆ ಇಲ್ಲದೇ ಬಂಧಿಸ ಕೂಡದು  ಎಂದು ತೀರ್ಪು ನೀಡಿತ್ತು.

loader