ಕರಾಚಿ[ಸೆ.18]: ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದ ದಂತ ವೈದ್ಯಕೀಯ ಕಾಲೇಜು ಹಾಸ್ಟೆಲ್‌ವೊಂದರಲ್ಲಿ ಹಿಂದು ವಿದ್ಯಾರ್ಥಿನಿ ನೇಣು ಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದೆ. ಕುಟುಂಬಸ್ಥರು ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ನಮ್ರತಾ ಚಾಂದಿನಿ ಮೃತ ವಿದ್ಯಾರ್ಥಿನಿ. ಲರ್ಕಾನ್‌ ಜಿಲ್ಲೆಯ ನಿವಾಸಿಯಾಗಿರುವ ನಮ್ರತಾ ದಂತ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಳು. ಸಾಮಾಜಿಕ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿದ್ದಳು.

ಚಾಂದಿನಿ ಕೊರಳಿಗೆ ಕೇಬಲ್‌ ವೈಯರ್‌ ಸುತ್ತಿದ್ದ, ಕೈಗಳನ್ನು ಬಲವಾಗಿ ಹಿಡಿದ ಗುರುತುಗಳಿವೆ. ಕೊಲೆ ನಡೆದಿರುವ ಶಂಕೆ ಇದೆ ಎಂದು ಅವಳ ಸಹೋದರ ವಿಶಾಲ್‌ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಿನ್ಸಿಪಾಲ್‌ ವಿರುದ್ಧ ಪ್ರಕರಣ ದಾಖಲಾಗಿದೆ.