ಮುಸ್ಲಿಂ ಬಾಹುಳ್ಯವಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಢಾಕಾ: ಮುಸ್ಲಿಂ ಬಾಹುಳ್ಯವಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ. 1947 ರಲ್ಲಿ 3ನೇ ಒಂದು ಭಾಗದಷ್ಟಿದ್ದ ಹಿಂದೂಗಳ ಸಂಖ್ಯೆ 2016 ರಲ್ಲಿ ಶೇ.9.5ಕ್ಕೆ ಇಳಿದಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರಾದ ಪ್ರೊ.ರಿಚರ್ಡ್ ಬೆಂಕಿನ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತೀಯ ವಿಚಾರ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಕಿನ್, ‘ದೇಶದಲ್ಲಿನ ಹಿಂದೂಗಳನ್ನು ನಾಶ ಮಾಡುವ ಯತ್ನಗಳು ನಡೆಯುತ್ತಿವೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಬಾಂಗ್ಲಾ ಸರ್ಕಾರ ವಿಫಲವಾಗಿದೆ’ ಎಂದಿದ್ದಾರೆ.