ಚೆನ್ನೈ, [ಮೇ.14]: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದು ನಾಥೂರಾಮ್ ಗೋಡ್ಸೆ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೇಳಿಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

 ಎಐಎಡಿಎಂಕೆ  ಸಚಿವ ಕೆ.ಟಿ. ರಾಜೇಂದ್ರ ಬಾಲಾಜಿ ಅವರು ಕಮಲ್ ಹಾಸನ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಕಮಲ್ ಹಾಸನ್ ಅವರ ನಾಲಿಗೆ ಕತ್ತರಿಸಬೇಕು ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಭಾರತದ ಮೊದಲ ಟೆರರಿಸ್ಟ್ ಹಿಂದೂ; ಕಮಲ್ ಹಾಸನ್ ವಿವಾದದ ಕಿಡಿ

ಇದೇ ವೇಳೆ ಮಕ್ಕಳ್ ನೀದಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ವಿರುದ್ಧ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ವೋಟ್ ಪಡೆಯುವ ಉದ್ದೇಶದಿಂದ ಕಮಲ್ ಹಾಸನ್ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಒಬ್ಬ ವ್ಯಕ್ತಿ ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ಆಕ್ರೊಶ ವ್ಯಕ್ತಪಡಿಸಿದರು.