ಹಾವೇರಿ[ಜು.07]: ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ 12 ಮಂದಿ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಂಖ್ಯೆ ಹೆಚ್ಚುತ್ತಿದ್ದಂತೆಯೇ ದೋಸ್ತಿ ಸರ್ಕಾರ ಪತನಗೊಳ್ಳುವ ಅನುಮಾನಗಳೂ ಹೆಚ್ಚಗಿವೆ. ಇವೆಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿಸಿ ಪಾಟೀಲ್ ಕ್ಷಮೆಯಾಚಿಸಿದ್ದಾರೆ. 

ಅಭಿಮಾನಿಗಳು, ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಬಿಸಿ ಪಾಟೀಲ್, ನಿಮ್ಮ ಆಶೀರ್ವಾದದಿಂದ ಮೂರು ಬಾರಿ ಶಾಸಕನಾಗಿದ್ದೇನೆ. ಆದರೆ ಬೇರೆಯವರಿಗೆ ಮಂತ್ರಿ ಸ್ಥಾನ ನೀಡಿ ತಾಲೂಕಿಗೆ ದ್ರೋಹ ಮಾಡಿದ್ದಾರೆ. ಹೀಗಾಗಿ ಹಿರೇಕೆರೂರು ತಾಲೂಕು ಅಭಿವೃದ್ಧಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

ಕೌರವ ವ್ಯಾಟ್ಸಪ್ ಗ್ರೂಪ್ ಮೂಲ ಬಿಸಿ ಪಾಟೀಲ್ ಕ್ಷಮೆ ಯಾಚಿಸಿದ್ದಾರೆ ಎಂಬುವುದು ಉಲ್ಲೇಖನೀಯ