ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಸ್ವಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಟ್ವೀಟ್ ನಲ್ಲಿ ಹೇಗೆಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ ನೋಡಿ.
ಬೆಂಗಳೂರು, [ಅ.07]: ಮತ್ತೆ ಸಚಿವ ವಿಸ್ತರಣೆ ಮುಂದೂಡಿರುವುದರಿಂದ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಗರಂ ಆಗಿದ್ದಾರೆ.
ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮುಂದೆ ಮಂಡಿಯೂರಿ, ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ನನಗೆ ನನ್ನ ಕ್ಷೇತ್ರದ ಮತದಾರರೇ ಹೈಕಮಾಂಡ್. ಸಂಪುಟ ವಿಸ್ತರಣೆಯನ್ನು ವಿಳಂಬದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಬಿಸಿ ಪಾಟೀಲ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಉತ್ತರ ಕರ್ನಾಟಕ ಭಾಗದಿಂದ 16 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಕೇವಲ ಒಬ್ಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಲಿಂತಾಯತ ಶಾಸಕರು ಏನು ಮಾಡಿದ್ದಾರೆ. ನಮ್ಮಲ್ಲಿಯೇ ಯಾರೋ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಬಿ.ಸಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದು, ಇದಕ್ಕೆ ನಾನಾ ಕಾರಣಗಳಿರಬಹುದು. ಆದರೆ, ಇದರಿಂದ ನಿಷ್ಠಾವಂತ ಕಾಂಗ್ರೆಸ್ಸಿಗರಿಗೆ ಅನ್ಯಾಯವಾಗುತ್ತಿದೆ.
ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲದ್ದಂತಾಗಿದೆ ಎಂದು ತಮ್ಮ ಪಕ್ಷದ ವಿರುದ್ಧವೇ ಬಿಸಿ ಪಾಟೀಲ್ ಅವರು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿನ ಹಿರಿಯ ನಾಯಕರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಇದು ಕಾಂಗ್ರೆಸ್ ನಾಯಕರಿಗೆ ಇರಿಸುಮುರಿಸು ಉಂಟಾಗಿದೆ.
