ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್ ಮಂಡನೆಯಾಗಿದೆ. ಈ ಬಜೆಟ್’ನಲ್ಲಿ ಮಹಿಳಾ ಉದ್ಯೋಗಿಗಳಿಗೆ ಕೆಲವು ಕೆಲ ಅನುಕೂಲಕರ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.  ಮಹಿಳಾ ಉದ್ಯೋಗಿಗಳಿಗೆ ಕಾರ್ಯ ಕ್ಷೇತ್ರದಲ್ಲಿ ಉತ್ತೇಜನ ನೀಡಲು ಅರುಣ್ ಜೇಟ್ಲಿ ಹೆಚ್ಚು ಒತ್ತು ನೀಡಿದ್ದಾರೆ.

ನವದೆಹಲಿ : ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್ ಮಂಡನೆಯಾಗಿದೆ. ಈ ಬಜೆಟ್’ನಲ್ಲಿ ಮಹಿಳಾ ಉದ್ಯೋಗಿಗಳಿಗೆ ಕೆಲವು ಕೆಲ ಅನುಕೂಲಕರ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಮಹಿಳಾ ಉದ್ಯೋಗಿಗಳಿಗೆ ಕಾರ್ಯ ಕ್ಷೇತ್ರದಲ್ಲಿ ಉತ್ತೇಜನ ನೀಡಲು ಅರುಣ್ ಜೇಟ್ಲಿ ಹೆಚ್ಚು ಒತ್ತು ನೀಡಿದ್ದಾರೆ.

ಮಹಿಳಾ ಉದ್ಯೋಗಿಗಳಿಗೆ ಇಪಿಎಫ್ಒ ಯೋಜನೆಯನ್ನು ಹೆಚ್ಚು ಸುಲಭಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ. ದೇಶದಲ್ಲಿ ಮಹಿಳಾ ಕೆಲಸಗಾರರ ಕೊಡುಗೆಯನ್ನು ಶೇ.6ರಿಂದ 10ರಷ್ಟು ಏರಿಕೆ ಮಾಡುವ ಸಲುವಾಗಿ ಕ್ರಮ ಕೈಗೊಳ್ಳಲಾಗಿದೆ.

ಅಲ್ಲದೇ ಎಲ್ಲಾ ಔದ್ಯೋಗಿಕ ಕ್ಷೇತ್ರಗಳಲ್ಲಿಯೂ ಕೂಡ ಮಹಿಳಾ ಕೆಲಸಗಾರರ ನೇಮಕಕ್ಕೆ ಕೇಂದ್ರವು ಒತ್ತು ನೀಡಿದ್ದು, ನಗರ ಪ್ರದೇಶ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಯೋಜನೆ ರೂಪಿಸುವ ಬಗ್ಗೆ ಬಜೆಟ್’ನಲ್ಲಿ ಘೋಷಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಬಜೆಟ್’ನಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಲಿಂಗ ತಾರತಮ್ಯ ನಿವಾರಣೆ, ಸಾಮಾಜಿಕ, ಆರ್ಥಿಕ ಕ್ಷೇತ್ರಗಳಲ್ಲಿ ಸಮಾನತೆ, ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಕೆಲವು ಯೋಜನೆಗಳ ಆರಂಭಕ್ಕೆ ಕೇಂದ್ರವು ಹೆಚ್ಚಿನ ಒತ್ತು ನೀಡುತ್ತಿದೆ.