ಬೆಂಗಳೂರು [ಜು.04] :  ಎಚ್‌.ವಿಶ್ವನಾಥ್‌ ರಾಜೀನಾಮೆ ನೀಡಿದ ರಾಜ್ಯಾಧ್ಯಕ್ಷ ಹುದ್ದೆಗೆ ಸಕಲೇಶಪುರದ ಶಾಸಕ ಹಾಗೂ ದಲಿತ ಮುಖಂಡ ಎಚ್‌.ಕೆ. ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. 

"

ಪಕ್ಷದ ಪರಿಶಿಷ್ಟವರ್ಗಕ್ಕೆ ಸೇರಿದ ನಾಯಕರಿಗೆ ಸೂಕ್ತ ಸ್ಥಾನ-ಮಾನ ನೀಡಿಲ್ಲ ಎಂಬ ಕೊರಗು ಇದ್ದು, ಅವರಿಗೆ ಮನ್ನಣೆ ನೀಡಲಾಗುವುದು ಎಂದು ಇತ್ತೀಚೆಗಷ್ಟೇ ದೇವೇಗೌಡರು ಹೇಳಿಕೆ ನೀಡಿದ್ದರು. ಅದರಂತೆ ಆರು ಬಾರಿ ಶಾಸಕರಾಗಿರುವ ಎಚ್‌.ಕೆ.ಕುಮಾರಸ್ವಾಮಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. 

 ಅಂತೆಯೇ ಪಕ್ಷದ ಯುವ ಘಟಕ ಅಧ್ಯಕ್ಷ ಮಧುಬಂಗಾರಪ್ಪ ಅವರಿಗೆ ಕಾರ್ಯಾಧ್ಯಕ್ಷ ಹುದ್ದೆ ನೀಡಲಾಗಿದೆ.  ಅಲ್ಲದೇ ನಿಖಿಲ್ ಕುಮಾರಸ್ವಾಮಿಗೆ ಕರ್ನಾಟಕ ಪ್ರದೇಶ ಯುವಜನತಾದಳ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ ಹಾಗೂ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ನಿಖಿಲ್ ಇಬ್ಬರೂ ಚುನಾವಣೆಯಲ್ಲಿ ಪರಾಭವಗೊಂಡಿದ್ದು, ಇದೀಗ ಮಹತ್ವದ ಜವಾಬ್ದಾರಿ ವಹಿಸಲಾಗಿದೆ.