ಸಚಿವ ಸ್ಥಾನ ದೊರೆಯದ ಬಗ್ಗೆ ಅಸಮಾಧಾನಗೊಂಡಿರುವ ಗದಗ ಶಾಸಕ ಎಚ್. ಕೆ.ಪಾಟೀಲ್ ಅವರು ಸೋಮವಾರ  ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರು: ಸಚಿವ ಸ್ಥಾನ ದೊರೆಯದ ಬಗ್ಗೆ ಅಸಮಾಧಾನಗೊಂಡಿರುವ ಗದಗ ಶಾಸಕ ಎಚ್. ಕೆ.ಪಾಟೀಲ್ ಅವರು ಸೋಮವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಾಲಿ ಸಚಿವ ಸಂಪುಟದಲ್ಲಿ ದಕ್ಷಿಣ ಕರ್ನಾಟಕದ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಲಾಗಿಲ್ಲ. ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ರಾಹುಲ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮತೋಲನ ಸರಪಡಿಸುವಂತೆ ನಾನು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇನೆ. ವೈಯಕ್ತಿಕವಾಗಿ ನನಗೆ ಸಚಿವ ಸ್ಥಾನ ನೀಡುವಂತೆ ಕೋರಿಲ್ಲ ಎಂದು ತಿಳಿಸಿದರು.