ಎಚ್‌.ಎಂ. ರೇವಣ್ಣ ಅವರು ಚಿಕಿತ್ಸೆಗಾಗಿ ಬೆಂಗಳೂರು ವಿಕ್ರಂ ಆಸ್ಪತ್ರೆಗೆ ದಾಖಲು| ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು[ಮಾ.31]: ಬೆನ್ನುನೋವು ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅವರು ಚಿಕಿತ್ಸೆಗಾಗಿ ಬೆಂಗಳೂರು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆನ್ನು ನೋವಿನಿಂದ ಬಳಲುತ್ತಿರುವ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ವೈದ್ಯರು ರೇವಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಚೇತರಿಕೆ ಕಂಡು ಬರುತ್ತಿದೆ.

ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಆರೋಗ್ಯ ವಿಚಾರಿಸಿದರು.