1990ರಲ್ಲಿ ಉತ್ತರ ಪ್ರದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ಉಂಟಾದಾಗ ರಾಜ್ಯಪಾಲರು ಜಗದಾಂಬಿಕ ಪಾಲ್ ಹಾಗೂ ಕಲ್ಯಾಣ್ ಸಿಂಗ್ ಅವರಿಗೆ ಬಹುಮತ ಸಾಬೀತಿಗೆ ಅವಕಾಶ ನೀಡಿದ ನಿದರ್ಶನವನ್ನು ಉಲ್ಲೇಖಿಸಿದ್ದಾರೆ
ನವದೆಹಲಿ(ಫೆ.13): ಓ. ಪನ್ನೀರ್ ಸೆಲ್ವಂ ಹಾಗೂ ವಿಕೆ ಶಶಿಕಲಾ ಅವರಿಗೆ ಒಂದು ವಾರದೊಳಗೆ ವಿಧಾನಸಭೆಯಲ್ಲಿ ಬಹುಮತ ಸಬೀತು ಪಡಿಸಲು ಅವಕಾಶ ನೀಡುವಂತೆ ಅಟಾರ್ನಿ ಜನರಲ್ ಮುಕುಲ್ ರೊಹಾಟ್ಗಿ ಸಲಹೆ ನೀಡಿದ್ದಾರೆ.
ವಿಧಾನಸಭೆಯ ವಿಶೇಷ ಅಧಿವೇಶನ ಕರೆದು ಬಹುಮತ ಸಾಬೀತಿಗೆ ಇಬ್ಬರಿಗೂ ಅವಕಾಶ ನೀಡಿ ಎಂದಿರುವ ಅವರು 1998ರಲ್ಲಿ ಉತ್ತರ ಪ್ರದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ಉಂಟಾದಾಗ ರಾಜ್ಯಪಾಲರು ಜಗದಾಂಬಿಕ ಪಾಲ್ ಹಾಗೂ ಕಲ್ಯಾಣ್ ಸಿಂಗ್ ಅವರಿಗೆ ಬಹುಮತ ಸಾಬೀತಿಗೆ ಅವಕಾಶ ನೀಡಿದ ನಿದರ್ಶನವನ್ನು ಉಲ್ಲೇಖಿಸಿದ್ದಾರೆ. ಈ ನಡುವೆಯೂ ನಾಳೆ ಬೆಳಿಗ್ಗೆ 10.30 ಕ್ಕೆ ಸುಪ್ರೀಂ ಕೋರ್ಟ್ ಶಶಿಕಲಾ ಅವರ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಪ್ರಕಟಿಸಲಿದೆ.
