ಮಂಜೇಗೌಡ ರಾಜೀನಾಮೆ ಅಂಗೀಕಾರ ಮಾಡಬೇಡಿ

Holenarasipura Constituency Fight
Highlights

ಮೋಟಾರು ವಾಹನ ನಿರೀಕ್ಷಕ ಹುದ್ದೆಯಲ್ಲಿದ್ದ ಮಂಜೇಗೌಡ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕುರಿತು ಲೋಕಾಯುಕ್ತ ದಾಳಿ ಪ್ರಕರಣ ಸೇರಿದಂತೆ ಬಳ್ಳಾರಿ ಅಕ್ರಮ ಗಣಿ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತು ಲೋಕಾಯುಕ್ತ ಜಂಟಿ ಇಲಾಖಾ ವಿಚಾರಣೆ ಸಹ ಬಾಕಿ ಇದೆ

ಬೆಂಗಳೂರು: ಹೊಳೆನರಸೀಪುರ ಕ್ಷೇತ್ರದಿಂದ ಎಚ್.ಡಿ. ರೇವಣ್ಣ ವಿರುದ್ಧ ಸ್ಪರ್ಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಿ.ಪಿ. ಮಂಜೇಗೌಡ ಸರ್ಕಾರಿ ನೌಕರಿಗೆ ನೀಡಿದ್ದ ರಾಜೀನಾಮೆ ಅಂಗೀಕರಿಸದಂತೆ ಕಾನೂನು ಇಲಾಖೆ ಅಭಿಪ್ರಾಯ ನೀಡಿದೆ.

ಮೋಟಾರು ವಾಹನ ನಿರೀಕ್ಷಕ ಹುದ್ದೆಯಲ್ಲಿದ್ದ ಮಂಜೇಗೌಡ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕುರಿತು ಲೋಕಾಯುಕ್ತ ದಾಳಿ ಪ್ರಕರಣ ಸೇರಿದಂತೆ ಬಳ್ಳಾರಿ ಅಕ್ರಮ ಗಣಿ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತು ಲೋಕಾಯುಕ್ತ ಜಂಟಿ ಇಲಾಖಾ ವಿಚಾರಣೆ ಸಹ ಬಾಕಿ ಇದೆ ಎಂದು ತಿಳಿದುಬಂದಿದ್ದು, ಇದೇ ಅವರ ರಾಜೀನಾಮೆ ಅಂಗೀಕಾರಕ್ಕೆ ಅಡ್ಡಿಯಾಗಿದೆ. ಮಂಜೇಗೌಡ ಸಲ್ಲಿಸಿರುವ ರಾಜೀನಾಮೆ ಅಂಗೀಕಾರ ಕುರಿತಂತೆ ಸಾರಿಗೆ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಕೇಳಿತ್ತು.

loader