ಶಿವಮೊಗ್ಗದ ಸಾಗರ,ಸೊರಬ, ತೀರ್ಥಹಳ್ಳಿ, ಹೊಸನಗರ, ಚಿಕ್ಕಮಗಳೂರಿನ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕೊಡಗು ಹಾಗೂ ದಕ್ಷಿಣ ಕನ್ನಡದ ಪೂರ್ಣ ಜಿಲ್ಲೆಗಳಿಗೆ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಬೆಂಗಳೂರು[ಆ.12]: ಭಾರಿ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು,ದಕ್ಷಿಣ ಕನ್ನಡ ಜಿಲ್ಲೆಗಳ ಶಾಲಾ - ಕಾಲೇಜುಗಳಿಗೆ ಜಿಲ್ಲಾಡಳಿತ ನಾಳೆ ರಜೆ ಘೋಷಿಸಿದೆ.
ಶಿವಮೊಗ್ಗದ ಸಾಗರ,ಸೊರಬ, ತೀರ್ಥಹಳ್ಳಿ, ಹೊಸನಗರ, ಚಿಕ್ಕಮಗಳೂರಿನ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕೊಡಗು ಹಾಗೂ ದಕ್ಷಿಣ ಕನ್ನಡದ ಪೂರ್ಣ ಜಿಲ್ಲೆಗಳಿಗೆ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಹವಾಮಾನ ಇಲಾಖೆ ಕೂಡ ಕೊಡಗು ಮತ್ತು ದಕ್ಷಿಣ ಕನ್ನಡಕ್ಕೆ ಪ್ರವಾಸಕ್ಕೆ ಹೋಗುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ. ಸತತ ಮಳೆಯಿಂದ ತತ್ತರಿಸಿದ್ದ ಕೇರಳಕ್ಕೆ ವರುಣಾರಾಯ ಕೊಂಚ ಬಿಡುವು ನೀಡಿದ್ದಾನೆ.
ಕಪಿಲಾ ನದಿಯಲ್ಲಿ ಪ್ರವಾಹ ತಗ್ಗಿದ್ದು ಕಬಿನಿ ಜಲಾಶಯದ ಒಳ ಹರಿವಿನಲ್ಲಿ ಭಾರಿ ಇಳಿಕೆಯಾಗಿದೆ. ಬೆಳಿಗ್ಗೆ 80,000 ಕ್ಯುಸೆಕ್ ಇದ್ದ ಒಳ ಹರಿವಿನ ಪ್ರಮಾಣ 50,900 ಕ್ಯುಸೆಕ್ ಗೆ ಇಳಿದಿದೆ.ಮಳೆಯಿಂದಾಗಿ ಬಂದ್ ಮಾಡಲಾಗಿದ್ದ ಮೈಸೂರು - ಊಟಿ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಇಂದು ತೆರವುಗೊಳಿಸುವ ಸಾಧ್ಯತೆಯಿದೆ. ನೆರೆಯಿಂದಾಗಿ ಮೂರು ದಿನಗಳಿಂದ ಬಂದ್ ಆಗಿತ್ತು. ಮಲೆನಾಡಿನಲ್ಲಿಯೂ ಮಳೆ ಅಬ್ಬರಿಸುತ್ತಿದ್ದು ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು ಕೇವಲ 7 ಅಡಿ ಮಾತ್ರ ಬಾಯಿಯಿದೆ. ಜಲಾಶಯ ನಿರ್ಮಾಣವಾದ ನಂತರ 16ನೇ ಸಾರಿ ತುಂಬುತ್ತಿದೆ.