ಬೆಂಗಳೂರು(ಸೆ.13): ಇಂದು ಬಕ್ರೀದ್ ಹಬ್ಬ ಇರುವುದರಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಸಾಮಾನ್ಯ ರಜೆ. ಆದರೆ ಸೆಪ್ಟಂಬರ್ 14ರಂದು ಮಕ್ಕಳ ಹಿತದೃಷ್ಟಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿದೆ. ಬೆಂಗಳೂರಿನಲ್ಲಂತೂ ನಿನ್ನೆ ಮಧ್ಯಾಹ್ನದಿಂದಲೇ ಶಾಲಾ - ಕಾಲೇಜು ಆಡಳಿತ ಮಂಡಳಿ ಮಕ್ಕಳಿಗೆ ರಜೆ ನೀಡಿದೆ.

ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಮಂಡ್ಯದಲ್ಲಿ ಕಳೆದ ಒಂದು ವಾರದಿಂದಲೂ ತರಗತಿಗಳು ನಡೆದೇ ಇಲ್ಲ.

ಇನ್ನೂ ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಅವಲೋಕಿಸಿ ರಜೆ ನೀಡಲು ಆಯಾ ಜಿಲ್ಲಾ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ ಕರುನಾಡ ಕಾವಲಿಗರಲ್ಲಿ ಶಾಂತ ರೀತಿಯಿಂದ ವರ್ತಿಸುವಂತೆ ವಿನಂತಿ ಮಾಡಿಕೊಳ್ಳುತ್ತೇವೆ.