ತೈಲ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಜಬರದಸ್ತ್ ಪ್ಲ್ಯಾನ್..!

Holistic strategy to find a long-term solution to fuel prices
Highlights

ತೈಲ ಬೆಲೆ ಹೆಚ್ಚಳ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಐತಿಹಾಸಿಕ ಯೋಜನೆ ಸಿದ್ದಪಡಿಸಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಹೇಳಿದ್ದಾರೆ. ಕಳೆದ ೧೫ ದಿನಗಳಿಂದ ನಿರಂತರವಾಗಿ ತೈಲ ಬೆಲೆ ಹೆಚ್ಚಳವಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಯೋಜನೆ ಸಿದ್ದಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನವದೆಹಲಿ(ಮೇ 28):ತೈಲ ಬೆಲೆ ಹೆಚ್ಚಳ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಐತಿಹಾಸಿಕ ಯೋಜನೆ ಸಿದ್ದಪಡಿಸಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಹೇಳಿದ್ದಾರೆ. ಕಳೆದ ೧೫ ದಿನಗಳಿಂದ ನಿರಂತರವಾಗಿ ತೈಲ ಬೆಲೆ ಹೆಚ್ಚಳವಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಯೋಜನೆ ಸಿದ್ದಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತೈಲ ಬೆಲೆಯು ಅಂತರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ನಿಗದಿಯಾಗುವುದಾದರೂ ನಿರಂತರ ಬೆಲೆ ಹೆಚ್ಚಳದಿಂದ ಜನತೆ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ತೈಲ ಬೆಲೆ ನಿರ್ದಿಷ್ಟವಾಗಿ ಇರುವಂತೆ ಮಾಡಲು ಕೇಂದ್ರ ಸರ್ಕಾರ ಯೋಜನೆ ಸಿದ್ದಪಡಿಸುತ್ತಿದೆ ಎಂದು ಪ್ರಧಾನ್ ಮಾಹಿತಿ ನೀಡಿದರು.

ಆದರೆ ತೈಲ ಬೆಲೆ ನಿಯಂತ್ರಣಕ್ಕೆ ಯಾವ ರೀತಿಯ ಯೋಜನೆ ಸಿದ್ದಪಡಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಸಚಿವರು, ಯೋಜನೆ ಈಗ ಆರಂಭದ ಹಂತದಲ್ಲಿದ್ದು, ಯೋಜನೆ ಸಿದ್ದವಾದ ಬಳಿಕವಷ್ಟೇ ಎಲ್ಲ ಮಾಹಿತಿಯನ್ನೂ ಹಂಚಿಕೊಳ್ಳಲಾಗುವುದು ಎಂದರು. ಇಂದೂ ಕೂಡ ಪೆಟ್ರೋಲ್ ಬೆಲೆ 15 ಪೈಸೆ ಮತ್ತು ಡಿಸೆಲ್ ಬೆಲೆ 12 ಪೈಸೆ ಅಧಿಕವಾಗಿದ್ದು, ನಿರಂತರ ಬೆಲೆ ಹೆಚ್ಚಳ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಸಿದೆ.

loader