ನವದೆಹಲಿ(ಜು.03): ರಾಷ್ಟ್ರ ರಾಜಧಾನಿ ನವದೆಹಲಿಯ ಚಾಂದನಿ ಚೌಕ್’ನಲ್ಲಿ ಸಂಭವಿಸಿದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಮುಖ್ಯಸ್ಥರಿಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮನ್ಸ್ ನೀಡಿದ್ದಾರೆ.

ಚಾಂದನಿ ಚೌಕ್ ಬಳಿಯ ಹೌಜ್ ಖಾಜಿ ಪ್ರದೇಶದಲ್ಲಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಮಧ್ಯೆ ಘರ್ಷಣೆ ಸಂಭವಿಸಿತ್ತು. ಘರ್ಷಣೆಯಲ್ಲಿ ಪಕ್ಕದ ದೇಗುಲವೊಂದಕ್ಕೆ ಹಾನಿ ಕೂಡ ಮಾಡಲಾಗಿತ್ತು. 

ಈ ಕುರಿತು ವಿವರಣೆ ಕೋರಿ ಅಮಿತ್ ಶಾ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಪಟ್ನಾಯಕ್, ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ನಾಲ್ಕು ಜನರನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.