ಅಕ್ರಮ ವಲಸಿಗರ ಗಡಿಪಾರಿಗೆ ಕೇಂದ್ರ ಸರ್ಕಾರ ಬದ್ಧ ಎಂದ ಅಮಿತ್ ಶಾ| ರಾಜ್ಯಸಭೆಯಲ್ಲಿ NRC ಕುರಿತ ಪ್ರಶ್ನೆಗೆ ಗೃಹ ಸಚಿವರ ಉತ್ತರ| ಕೇಂದ್ರ ಸರ್ಕಾರ NRCಯನ್ನು ದೇಶದ ಇತರ ರಾಜ್ಯಗಳಿಗೂ ವಿಸ್ತರಿಸುವುದೇ?| ‘ಅಕ್ರಮ ವಲಸಿಗರನ್ನು ಗುರುತಿಸಲು ಸಾಧ್ಯವಾದ ಎಲ್ಲ ಕ್ರಮಕೈಗೊಳ್ಳಲು ಸಿದ್ಧ’| ಅಂತಾರಾಷ್ಟ್ರೀಯ ಕಾನೂನಿನ ಅಡಿಯಲಲ್ಲೇ ಅಕ್ರಮ ವಲಸಿಗರ ಗಡಿಪಾರು|
ನವದೆಹಲಿ(ಜು.17): ಅಕ್ರಮ ವಲಸಿಗರು ದೇಶದ ಯಾವುದೇ ಮೂಲೆಯಲ್ಲಿ ನೆಲೆಸಿದ್ದರೂ ಅವರನ್ನು ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಗಡಿಪಾರು ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
NRCಯನ್ನು ದೇಶದ ಇತರ ರಾಜ್ಯಗಳಿಗೂ ವಿಸ್ತರಿಸಲಾಗುವುದೇ ಎಂದು ರಾಜ್ಯಸಭೆಯಲ್ಲಿ ಎಸ್’ಪಿ ಸದಸ್ಯ ಜಾವೇದ್ ಅಲಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು, ಅಕ್ರಮ ವಲಸಿಗರನ್ನು ಗುರುತಿಸಲು ಸಾಧ್ಯವಾದ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದರು.
ಅಕ್ರಮ ವಲಸಿಗರು ಕೇವಲ ದೇಶದ ಈಶಾನ್ಯ ಭಾಗದಲ್ಲಿ ಮಾತ್ರವಲ್ಲದೇ ಇತರ ಭಾಘದಲ್ಲೂ ನೆಲೆಸಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಗುರುತಿಸಿ ಗಡಿಪಾರು ಮಾಡಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಮಿತ್ ಶಾ ಸ್ಪಷ್ಟಪಡಿಸಿದರು.
