ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತುಮಕೂರು (ಡಿ.15): ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತುಮಕೂರಿನ ಹೆಗ್ಗೆರೆಯಲ್ಲಿರುವ ಮೆಡಿಕಲ್ ಕಾಲೇಜ್​ನ ಆಸ್ಪತ್ರೆಗೆ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದ ಪ್ರೇಮಾ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇವರ ಬಳಿ ಯಶಸ್ವಿನಿ ಕಾರ್ಡ್ ಇದ್ದರೂ ಕೂಡ 7 ಸಾವಿರ ರೂ. ಕಟ್ಟಿಸಿಕೊಂಡಿದ್ದಾರೆ. ಔಷಧಿಗಾಗಿ 8 ಸಾವಿರ ರೂ. ವಸೂಲಿ ಮಾಡಿದ್ದಾರೆ. ಖರ್ಚಾದ ಎಲ್ಲಾ ಹಣವನ್ನೂ ಯಶಸ್ವಿನಿಯಿಂದ ಭರಿಸಿಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಆದರೆ ಪ್ರೇಮಾ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ತಿಂಗಳು ಕಳೆದರೂ ಇನ್ನೂ ಹಣ ನೀಡಿಲ್ಲವೆಂದು ಮಹಿಳೆ ಆರೋಪಿಸಿದ್ದಾಳೆ.