ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಡಿಜಿ-ಐಜಿಗಳ ಮಹತ್ವದ  ಸಭೆ ಶನಿವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆಯಿದೆ.

ಬೆಂಗಳೂರು (ಡಿ.14): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಡಿಜಿ-ಐಜಿಗಳ ಮಹತ್ವದ ಸಭೆ ಶನಿವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred

ಬಿಜೆಪಿ ತಂತ್ರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿತಂತ್ರ ರೂಪಿಸಲಿದೆ. ಗೃಹ ಸಚಿವ ರಾಮಲಿಂಗಾರೆಡ್ಡಿ 6 ವಿಭಾಗದ ಡಿಜಿ, ಐಜಿಗಳ ಸಭೆ ಕರೆದಿದ್ದಾರೆ.

ಕೋಮುಗಲಭೆಗೆ ಬಿಜೆಪಿ ನೀಡುತ್ತಿರುವ ಕುಮ್ಮಕ್ಕನ್ನು ವಿಫಲಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಇನ್ನೂ ಅನೇಕ ಜಿಲ್ಲೆಗಳಲ್ಲಿ ಬಿಜೆಪಿ ಗಲಭೆಗಳು ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಡಿಜಿ-ಐಜಿಗಳ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಸಭೆ ಬಗ್ಗೆ ಐಜಿಗಳ ಜೊತೆ ದೂರವಾಣಿ ಮೂಲಕ ಗೃಹ ಸಚಿವರು ರಾಮಲಿಂಗಾ ರೆಡ್ಡಿ ಮಾತನಾಡಿದ್ದು ಇದೇ ಶನಿವಾರ ಅಥವಾ ಸೋಮವಾರ ಡಿಜಿ-ಐಜಿಗಳ ಸಭೆ ನಡೆಯುವ ಸಾಧ್ಯತೆಯಿದೆ.

ಸರ್ಕಾರ ಮತ್ತು ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ನಡೆಯುತ್ತಿದೆ. ಇದಕ್ಕೆಲ್ಲ ಆಸ್ಪದ ನೀಡಬೇಡಿ. ಗೊಂದಲ ಸೃಷ್ಟಿಯಾಗದಂತೆ ಕ್ರಮ ಕೈಗೊಳ್ಳಿ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುವಂತೆ ಐಜಿಗಳಿಗೆ ಸೂಚನೆ ನೀಡಿದ್ದಾರೆ.