Asianet Suvarna News Asianet Suvarna News

ಸಿಎಂ ಭರ್ಜರಿ ಗುಡ್ ನ್ಯೂಸ್ : ಭೂಮಿ ಖರೀದಿಗೆ ಸರ್ಕಾರದಿಂದ ಹಣ

ಮುಖ್ಯಮಂತ್ರಿ ಇದೀಗ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಮನೆ ಇಲ್ಲದವರು ಮನೆ ನಿರ್ಮಿಸಿಕೊಳ್ಳಲು ಭೂಮಿ ಖರೀದಿಗೆ ಸರ್ಕಾರದಿಂದಲೇ ಹಣ ನೀಡಲಾಗುವುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. 

Homeless To Get 60000 For Land To Build Home
Author
Bengaluru, First Published Oct 5, 2018, 3:54 PM IST
  • Facebook
  • Twitter
  • Whatsapp

ಪಾಟ್ನಾ :   ಮನೆ ಇಲ್ಲದವರು ಮನೆ ನಿರ್ಮಾಣ ಮಾಡಿಕೊಳ್ಳಲು ಭೂಮಿ ಖರೀದಿಗಾಗಿ ಸರ್ಕಾರದಿಂದ 60 ಸಾವಿರ ಹಣವನ್ನು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. 

ಅಲ್ಲದೇ ಈ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1.2 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ. 

ಹೊಸ ಯೋಜನೆಯ ಅಡಿಯಲ್ಲಿ ಭೂಮಿಯನ್ನು ರಿಜಿಸ್ಟರ್ ಮಾಡಿಕೊಳ್ಳುವ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ಈ ಯೋಜನೆಯನ್ನು ಸಿಎಂ ಗ್ರಾಮೀಣ ಆವಾಸ್ ಯೋಜನೆಗೆ ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಹೇಳಿದರು. 

ಈಗಾಗಲೇ ರಾಜ್ಯದಲ್ಲಿ ಈ ಯೋಜನೆಗಳನ್ನು ಜಾರಿಗೆ ತರಲು ಗ್ರಾಮೀಣ ಅಭಿವೃದ್ಧಿ ಪ್ರಾಧಿಕಾರ ಕಾರ್ಯನಿರತವಾಗಿದೆ ಎಂದು ಅವರು ತಿಳಿಸಿದ್ದಾರೆ.  ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ.

Follow Us:
Download App:
  • android
  • ios