ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್'ಳನ್ನೂ ಹರಿಯಾಣ ಪೊಲೀಸರು ಪಂಜಾಬ್ ನಲ್ಲಿ ಬಂಧಿಸಿದ್ದಾರೆ.
ನವದೆಹಲಿ (ಅ.04): ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್'ಳನ್ನೂ ಹರಿಯಾಣ ಪೊಲೀಸರು ಪಂಜಾಬ್ ನಲ್ಲಿ ಬಂಧಿಸಿದ್ದಾರೆ.
ಅತ್ಯಾಚಾರಿ ಬಾಬಾ ಜೈಲು ಪಾಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಹನಿಪ್ರೀತ್ ಳನ್ನು ಒಂದು ತಿಂಗಳ ನಂತರ ಇಂದು ಜಿರ್ಕಾಪುರ್ -ಪಟಿಯಾಲ ರಸ್ತೆಯಲ್ಲಿ ಹರಿಯಾಣ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹನಿಪ್ರೀತ್ ಳನ್ನು ಪಂಚಕುಲ ಕೋರ್ಟ್ ಗೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
