ಈ ಸಂದರ್ಭದಲ್ಲಿ ಮಾಲೀಕರಿಗೆ ಸಾಕಷ್ಟು ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಹುಡುಗಿಯರನ್ನು ಚುಡಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು

ಬೆಂಗಳೂರು(ಡಿ.24): ನಗರದಲ್ಲಿ ಹೋಟೆಲ್, ರೆಸ್ಟೋರೆಂಟ್​​​​ಗಳ ಅವಧಿ ವಿಸ್ತರಿಸಲಾಗಿದೆ. ವೈನ್ ಶಾಪ್ ಹೊರತುಪಡಿಸಿ ಡಿಸೆಂಬರ್ 31ರ ರಾತ್ರಿ 2 ಗಂಟೆಯವರೆಗೂ ಹೋಟೆಲ್​​​, ರೆಸ್ಟೋರೆಂಟ್​​​​ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ ರೆಡ್ಡಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಲೀಕರಿಗೆ ಸಾಕಷ್ಟು ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಹುಡುಗಿಯರನ್ನು ಚುಡಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred