ಕಾಂಗ್ರೆಸ್ ಪಕ್ಷದ ಬೆಂಬಲಿಗರು ಈಗಾಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪಕ್ಷಕ್ಕೆ ನೂತನ ಅಧ್ಯಕ್ಷರು ದೊರಕಿದ ಹಿನ್ನೆಲೆಯಲ್ಲಿ ಎಲ್ಲೆಡೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚುತ್ತಿದ್ದಾರೆ.
ನವದೆಹಲಿ (ಡಿ.15): ಕಾಂಗ್ರೆಸ್’ಗೆ ನೂತನ ಸಾರಥಿಯಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಡಿಸೆಂಬರ್ 16ರಂದು ಅಧ್ಯಕ್ಷ ಪಟ್ಟಕ್ಕೆ ಏರಲಿದ್ದಾರೆ.
ಈ ನಿಟ್ಟಿನಲ್ಲಿ ಪಕ್ಷದ ಬೆಂಬಲಿಗರು ಈಗಾಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪಕ್ಷಕ್ಕೆ ನೂತನ ಅಧ್ಯಕ್ಷರು ದೊರಕಿದ ಹಿನ್ನೆಲೆಯಲ್ಲಿ ಎಲ್ಲೆಡೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚುತ್ತಿದ್ದಾರೆ.
ಇನ್ನೊಂದೆಡೆ ರಾಹುಲ್ ಗಾಂಧಿ ಫೋಟೊ ಇರುವ ಕೀ ಚೈನ್’ಗಳನ್ನು ಹಂಚಿಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೂತನ ಅಧ್ಯಕ್ಷರ ಪಟ್ಟಾಭಿಷೇಕಕ್ಕೆ ಸಕಲ ಸಿದ್ಧತೆಗಳು ನಡೆದಿವೆ.
ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಅಲ್ಲದೇ ಪಕ್ಷದ ಮುಖ್ಯ ಕಚೇರಿ ಮುಂದೆ ರಾಹುಲ್ ಗಾಂಧಿ ಫೋಟೊಗಳನ್ನು ಕೂಡ ಹಾಕಲಾಗುತ್ತಿದೆ.
ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಪಕ್ಷದ ಕಚೇರಿ ಬಳಿಯಲ್ಲಿ ನೆರೆಯುವ ನಿರೀಕ್ಷೆ ಇದೆ.
