ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರ್’ಎಸ್ಎಸ್ ಹಾಗೂ ಬಿಜೆಪಿಯ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಕಾಂಗ್ರೆಸ್ ಪ್ರತಿ ಹಂತದಲ್ಲೂ ಮಹಿಳೆಯರಿಗೆ ಪ್ರಾಮುಖ್ಯತೆ ನೀಡಿದೆ. ಕಾಂಗ್ರೆಸ್ ಪ್ರತಿ ಘಟಕದಲ್ಲೂ ಮಹಿಳೆಯರಿದ್ದಾರೆ ಆದರೆ ಆರ್’ಎಸ್’ಎಸ್ ಹಾಗೂ ಬಿಜೆಪಿ ಮಹಿಳೆಯರಿಗೆ ಅವಕಾಶವನ್ನೇ ನೀಡಿಲ್ಲ ಎಂದು ಟೀಕಿಸಿದ್ದಾರೆ.

ನವದೆಹಲಿ (ಅ.10: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರ್’ಎಸ್ಎಸ್ ಹಾಗೂ ಬಿಜೆಪಿಯ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಕಾಂಗ್ರೆಸ್ ಪ್ರತಿ ಹಂತದಲ್ಲೂ ಮಹಿಳೆಯರಿಗೆ ಪ್ರಾಮುಖ್ಯತೆ ನೀಡಿದೆ. ಕಾಂಗ್ರೆಸ್ ಪ್ರತಿ ಘಟಕದಲ್ಲೂ ಮಹಿಳೆಯರಿದ್ದಾರೆ ಆದರೆ ಆರ್’ಎಸ್’ಎಸ್ ಹಾಗೂ ಬಿಜೆಪಿ ಮಹಿಳೆಯರಿಗೆ ಅವಕಾಶವನ್ನೇ ನೀಡಿಲ್ಲ ಎಂದು ಟೀಕಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಿಳೆಯರು ಮೌನವಾಗಿದ್ದರೆ ಅವರು ಒಳ್ಳೆಯವರೆಂದು ಬಿಜೆಪಿ ಭಾವಿಸುತ್ತದೆ. ಒಂದು ವೇಳೆ ಮಹಿಳೆಯರು ಧ್ವನಿ ಎತ್ತಿದರೆ ಅವರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಪ್ರಯತ್ನಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಆರ್’ಎಸ್’ಎಸ್ ಘಟಕದಲ್ಲಿ ಎಷ್ಟು ಜನ ಮಹಿಳೆಯರಿದ್ದಾರೆ? ಆರ್’ಎಸ್’ಎಸ್ ಶಾಖೆಗಳಲ್ಲಿ ಮಹಿಳೆಯರು ಶಾರ್ಟ್ಸ್ ಧರಿಸಿದ್ದನ್ನು ನೀವು ನೋಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷ ಗುಜರಾತ್’ನಲ್ಲಿ ಆಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಆದ್ಯತೆ ನೀಡುತ್ತೇವೆ. ಅವರ ಸಮಸ್ಯೆಗಳನ್ನು ಬಗೆಹರುಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.