ಕ್ರಿಕೆಟರ್ ಅಂಬಾಟಿ ರಾಯುಡು ಇದೀಗ ಹಿರಿಯ ನಾಗರಿಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಆರೋಪಕ್ಕೀಡಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲಾತಾಣಗಳಲ್ಲಿ ರಾಯುಡು ಹಿರಿಯ ವ್ಯಕ್ತಿಯೊಬ್ಬರನ್ನು ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.

ಮುಂಬೈ(ಆ.31): ಕ್ರಿಕೆಟರ್ ಅಂಬಾಟಿ ರಾಯುಡು ಇದೀಗ ಹಿರಿಯ ನಾಗರಿಕರ ಮೇಲೆ ಹಲ್ಲೆ ನಡೆಸಿರುವ ಆರೋಪಕ್ಕೀಡಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲಾತಾಣಗಳಲ್ಲಿ ರಾಯುಡು ಹಿರಿಯ ವ್ಯಕ್ತಿಯೊಬ್ಬರನ್ನು ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.

ಆರೋಪವೇನು?

ಬೆಳಗ್ಗಿನ ಜಾವ ಕ್ರಿಕೆಟರ್ ರಾಯುಡು ವೇಗವಾಗಿ ತಮ್ಮ ಕಾರು ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಕಿಂಗ್'ಗೆ ತೆರಳುತ್ತಿದ್ದ ಕೆಲ ನಾಗರಿಕರಿಗೆ ಕಾರಿನಿಂದ ಗುದ್ದಿದ್ದಾರೆ. ಇದರಿಂದ ಕೋಪಗೊಂಡ ಹಿರಿಯರು ರಾಯುಡುಗೆ ಬುದ್ಧಿವಾದ ಹೇಳಿದ್ದಾರೆ. ಇವರ ಮಾತಿನಿಂದ ಅಸಾಮಾಧಾನಗೊಂಡ ರಾಯುಡು ತನ್ನ ತಪ್ಪಿದ್ದರೂ ಕಾರಿನಿಂದ ಹೊರಬಂದು ವೃದ್ಧರ ಮೇಲೆ ಹಲ್ಲೆ ನಡೆಸಿದ್ದಾರೆ.

ಸ್ಥಳದಲ್ಲಿದ್ದವರು ರಾಯುಡುವನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಆದರೆ ಹಲ್ಲೆಗೀಡಾದ ವೃದ್ಧರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಕುರಿತಾಗಿ ಬಿಸಿಸಿಐಗೂ ದೂರು ನೀಡುವುದಾಗಿ ತಿಳಿಸಿದ್ದಾರೆ.