ಹೈದರಾಬಾದ್ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ವರದಿಯನ್ನು ಸಾರ್ವಜನಿಕಗೊಳಿಸುವಂತೆ ಕೇಳಿದ ಆರ್ ಟಿಐ ಮನವಿಯನ್ನು ಮಾನವ ಸಂಪನ್ಮೂಲ ಇಲಾಖೆ ನಿರಾಕರಿಸಿದೆ.

ನವದೆಹಲಿ (ಜ.22): ಹೈದರಾಬಾದ್ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ವರದಿಯನ್ನು ಸಾರ್ವಜನಿಕಗೊಳಿಸುವಂತೆ ಕೇಳಿದ ಆರ್ ಟಿಐ ಮನವಿಯನ್ನು ಮಾನವ ಸಂಪನ್ಮೂಲ ಇಲಾಖೆ ನಿರಾಕರಿಸಿದೆ.

ವೇಮುಲ ಸಾವಿನ ತನಿಖಾ ವರದಿಯನ್ನು ಸಲ್ಲಿಸಲಾಗಿದೆ. ಅದರ ಪ್ರತಿಯನ್ನು ಕೊಡಲಾಗುವುದಿಲ್ಲ ಎಂದು ಮಾನವ ಸಂಪನ್ಮೂಲ ಇಲಾಖೆ ಹೇಳಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ನ್ಯಾ. ಅಶೋಕ್ ಕುಮಾರ್ ರೂಪನ್ ವಾಲ್ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗ ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಬಹಿರಂಗಗೊಳಿಸುವಂತೆ ಆರ್ ಟಿಐ ಸಲ್ಲಿಸಲಾಗಿತ್ತು.