Asianet Suvarna News Asianet Suvarna News

ಸಿಎಂ ಸ್ಥಾನ ತ್ಯಜಿಸಲು ಕಾಂಗ್ರೆಸ್‌ನಿಂದ 48 ಗಂಟೆ ಡೆಡ್‌ಲೈನ್!

ರಾಜ್ಯವನ್ನು ಬೆಚ್ಚಿ ಬೀಳಿಸಿದ ದಿಢೀರ್ ರಾಜಕೀಯ ಬೆಳವಣಿಗೆ! ಸ್ಥಾನ ತ್ಯಜಿಸುವಂತೆ ಸಿಎಂಗೆ 48 ಗಂಟೆ ಸಮಯ ಕೊಟ್ಟ ಕಾಂಗ್ರೆಸ್! ಗೋವಾ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಪರಿಕ್ಕರ್ ಅನಾರೋಗ್ಯ! ಗೋವಾ ಸಿಎಂ ಮನೋಹರ್ ಪರಿಕ್ಕರ್ ಅನಾರೋಗ್ಯದಲ್ಲಿ ತೀವ್ರ ಏರುಪೇರು! ಮುಖ್ಯಮಂತ್ರಿ ಬದಲಿಸುವಂತೆ ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯ
 

Hundreds March To Ailing Manohar Parrikar Home To Urge Step Down
Author
Bengaluru, First Published Nov 21, 2018, 11:56 AM IST

ಪಣಜಿ(ನ.21): ಗೋವಾದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ಆರಂಭವಾಗಿದ್ದು, ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಕೂಡಲೇ ಸಿಎಂ ಸ್ಥಾನದಿಂದ 48 ಗಂಟೆಗಳೊಳಗೆ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ತೀವ್ರ ಅನಾರೋಗ್ಯದ ಹೊರತಾಗಿಯೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿರುವ ಮನೋಹರ ಪಾರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ನೂರಾರು ಮಂದಿ ಮುಖ್ಯಮಂತ್ರಿಗಳ ಖಾಸಗಿ ನಿವಾಸಕ್ಕೆ ಪಾದಯಾತ್ರೆ ನಡೆಸಿದರು. ಪರಿಕ್ಕರ್ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಅವರ ಸ್ಥಾನದಲ್ಲಿ ಪೂರ್ಣಾವಧಿ ಮುಖ್ಯಮಂತ್ರಿ ಬೇಕು ಎಂದು ಆಗ್ರಹಿಸಿದ್ದಾರೆ.

Hundreds March To Ailing Manohar Parrikar Home To Urge Step Down

ಈ ಪಾದಯಾತ್ರೆಗೆ ಕಾಂಗ್ರೆಸ್ ಹೊರತುಪಡಿಸಿ, ಎನ್‌ಸಿಪಿ ಹಾಗೂ ಶಿವಸೇನೆ ಕೂಡಾ ಬೆಂಬಲ ಸೂಚಿಸಿವೆ. ಸಾಮಾಜಿಕ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು ಪಾದಯಾತ್ರೆಯನ್ನು ಬೆಂಬಲಿಸಿವೆ.

ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಒಂಬತ್ತು ತಿಂಗಳಿಂದ ಪರಿಕ್ಕರ್ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಡೀ ರಾಜ್ಯದ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ಹೇಳಿದರು.

Follow Us:
Download App:
  • android
  • ios