ವಿಚ್ಛೇದನ ವಿಚಾರಕ್ಕೆ ಸಂಬಂಧಿಸಿದಂತೆ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. 45 ವರ್ಷದ ಮಂಜುಳಾ ಕೊಲೆಯಾದ ದುರ್ದೈವಿಯಾಗಿದ್ದು, ಪತಿ ಮೈಲಾರಯ್ಯನೇ ಮಚ್ಚಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ
ಬೆಂಗಳೂರು(ಜೂ.02): ವಿಚ್ಛೇದನ ವಿಚಾರಕ್ಕೆ ಸಂಬಂಧಿಸಿದಂತೆ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. 45 ವರ್ಷದ ಮಂಜುಳಾ ಕೊಲೆಯಾದ ದುರ್ದೈವಿಯಾಗಿದ್ದು, ಪತಿ ಮೈಲಾರಯ್ಯನೇ ಮಚ್ಚಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ.
ವಿಚ್ಛೇದನ ವಿಚಾರವಾಗಿ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ನಿನ್ನೆ ರಾತ್ರಿ 9.30 ಸುಮಾರಿಗೆ ಜಗಳವಾಗಿದೆ. ಈ ಸಮಯದಲ್ಲಿ ಮಕ್ಕಳಾದ ಈಶ್ವರ್ ಮತ್ತು ಗಗನ್ ತಂದೆಗೆ ಬೈದು ಮನೆ ಬಿಟ್ಟು ಹೋಗುವಂತೆ ಸೂಚಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮೈಲಾರಯ್ಯ ಮಂಜುಳಾ ರೂಮಿಗೆ ಪ್ರವೇಶಿಸಿ ಅಲ್ಲೇ ಇದ್ದ ಮಚ್ಚಿನಿಂದ ಕತ್ತು ಸೀಳಿ ಹೊರ ಬಂದಿದ್ದಾನೆ. ಮಚ್ಚಿನ ಹೊಡೆತಕ್ಕೆ ಸ್ಥಳದಲ್ಲಿಯೇ ಕುಸಿದು ಬಿದ್ದ ಮಂಜುಳಾ ಕೊನೆ ಉಸಿರೆಳೆದಿದ್ದಾಳೆ.
ಇದನ್ನು ಕಂಡ ಮಕ್ಕಳು ತಂದೆಯನ್ನು ಹಿಗ್ಗಾ ಮುಗ್ಗಾ ತಳಿಸಿ ಪೊಲೀಸ್'ಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಇಂದಿರಾ ನಗರ ಆರೋಪಿ ಮೈಲಾರಯ್ಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
