ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಘಟನೆಗೆ ಸರ್ಕಾರದ ಪರವಾಗಿ ಕ್ಷಮೆ ಕೋರುವುದಾಗಿ ಆರೋಗ್ಯ ಸಚಿವ ರಮೇಶ್‌ಕುಮಾರ್ ಹೇಳಿದರು.
ಬೆಂಗಳೂರು (ಮೇ.02): ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಘಟನೆಗೆ ಸರ್ಕಾರದ ಪರವಾಗಿ ಕ್ಷಮೆ ಕೋರುವುದಾಗಿ ಆರೋಗ್ಯ ಸಚಿವ ರಮೇಶ್ಕುಮಾರ್ ಹೇಳಿದರು.
ಶಿವಮೊಗ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದೆ ಅನಾರೋಗ್ಯ ಪತ್ನಿಯನ್ನು ಎಳೆದು ಚಿಕಿತ್ಸೆ ಕೊಡಿಸಿದ ಪ್ರಕರಣ ನಡೆದಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ಇಲಾಖೆ ಕಾರ್ಯದರ್ಶಿಯಿಂದ ವರದಿ ಕೇಳಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
‘ಇದು ಸರ್ಕಾರಕ್ಕೆ ಕೂಡಾ ಗೌರವ ತರುವ ವಿಚಾರ ಅಲ್ಲ. ಇದರಿಂದ ಎಲ್ಲರಿಗೂ ನೋವಾಗಿದೆ. ಲೋಪ ಆಗಿರುವುದನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ. ಇದು ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಅವರೊಂದಿಗೂ ಮಾತನಾಡಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ದಿನಗಳ ಒಳಗಾಗಿ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.
